ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಭಾರತದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಮಳೆ ಸೃಷ್ಟಿಸಿರುವ ಅವಾಂತರಗಳು ಕಡಿಮೆಯಾಗಿಲ್ಲ. ಹಿಮಾಚಲ ಪ್ರದೇಶದಲ್ಲಿ ಮಳೆ ಇನ್ನೂ ಮುಂದುವರಿದಿದ್ದು, ಇನ್ನೆರಡು ದಿನ ಮಳೆ ಸುರಿಯುವ ಸಾಧ್ಯತೆ ಇದೆ.
ಪಂಜಾಬ್, ಹರಿಯಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನರು ಮಳೆಯಿಂದಾಗಿ ಮನೆಗಳನ್ನು ಕಳೆದುಕೊಂಡು ಜನಜೀವನ ಅಸ್ತವ್ಯಸ್ಥವಾಗಿದೆ.
ಇನ್ನು ಹಿಮಾಚಲ ಪ್ರದೇಶದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾಕಷ್ಟು ರಸ್ತೆಗಳಲ್ಲಿ ಭೂಕುಸಿತ ಆಗುವ ಸಂಭವವಿದ್ದು, ಅಪಾಯಕಾರಿ ರಸ್ತೆಗಳು ಹಾಗೂ ಹೆದ್ದಾರಿಗಳಲ್ಲಿ ಓಡಾಡದಂತೆ ಸೂಚನೆ ನೀಡಲಾಗಿದೆ.