ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆರೆಯ ಪಾಕಿಸ್ತಾನದಲ್ಲಿ ಶನಿವಾರ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, 25 ಜನರು ಸಾವನ್ನಪ್ಪಿದ್ದು, 145 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯುವ್ಯ ಭಾಗದಲ್ಲಿ ಮಳೆಯಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಮಳೆಯಿಂದಾಗಿ ಹಲವು ಮನೆಗಳು ಕುಸಿದಿವೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬನ್ನು, ಲಕ್ಕಿ ಮಾರ್ವತ್ ಮತ್ತು ಕರಕ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿ ಖತೀರ್ ಅಹ್ಮದ್ ತಿಳಿಸಿದ್ದಾರೆ. ಇದರೊಂದಿಗೆ ಇಲ್ಲಿ ಆಲಿಕಲ್ಲು ಮಳೆಯೂ ಸುರಿದಿದೆ. ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಮರಗಳು ಬಿದ್ದಿವೆ. ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಗಾಯಾಳುಗಳಿಗೆ ತಕ್ಷಣದ ನೆರವು ನೀಡಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.
ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಶನಿವಾರ ಮಳೆಯಿಂದಾಗಿ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಪರಿಹಾರ ಕಾರ್ಯಗಳನ್ನು ವೇಗಗೊಳಿಸಲು ಅಧಿಕಾರಿಗಳಿಗೆ ಆದೇಶಿಸಿದರು. ಮಳೆಯ ಹಿನ್ನೆಲೆಯಲ್ಲಿ ಪಾಕ್ ಸೇನೆಯು ನೆರೆ ಪೀಡಿತ ಪ್ರದೇಶಗಳಿಂದ ಜನರನ್ನು ರಕ್ಷಿಸುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.