ಪುದುಚೆರಿಯಲ್ಲಿ ಹೆಚ್ಚಾಯ್ತು ಮಳೆ, ಶಾಲೆ ಮಕ್ಕಳಿಗೆ ಇನ್ನೆರಡು ದಿನ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಪುದುಚೆರಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ. ಶಾಲಾ ಶಿಕ್ಷಣ ನಿರ್ದೇಶನಾಲಯ ಪುದುಚೆರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿಯಾಗಿ ನಿರ್ವಹಿಸಲ್ಪಡುವ ಶಾಲೆಗಳಿಗೆ ಇಂದು ಹಾಗೂ ನಾಳೆ ರಜೆ ಘೋಷಿಸಲಾಗಿದೆ.

ನೀಲಗಿರಿ, ಕರೂರ್, ಕಡಲೂರ್, ಅರಿಯಲೂರು, ತಿರುವರೂರು ಮತ್ತು ತಂಜಾವೂರುಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ ೬ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ.

ಮಳೆ ಹೆಚ್ಚಾಗಿರುವುದರಿಂದ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎರಡು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಎ. ನಮಸ್ಸಿವಾಯಂ ತಿಳಿಸಿದ್ದಾರೆ.

 

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!