ಭಾರೀ ಮಳೆಯಿಂದಾಗಿ ಭೂಕುಸಿತ: ಸಂಚಾರ ಅಸ್ತವ್ಯಸ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿಕ್ಕಿಂ ಭಾರೀ ಮಳೆಯಿಂದ ನಲುಗುತ್ತಿದೆ. ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಬಂದ್ ಆಗಿದ್ದು, ಇದರಿಂದ ಸ್ಥಳೀಯರು ಹಾಗೂ ಪ್ರವಾಸಿಗರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಿಕ್ಕಿಂ ಸರ್ಕಾರವು ಪರಿಹಾರ ಕ್ರಮಗಳ ಜೊತೆಗೆ  ಅಗತ್ಯವಿರುವ ಕಡೆ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿದೆ. ಮಳೆಯಿಂದ ತತ್ತರಿಸಿರುವ ಸಿಕ್ಕಿಂನಲ್ಲಿ ಅಧಿಕಾರಿಗಳು ಭಾರೀ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ.

ಎರಡನೇ ದಿನವೂ ಮುಂದುವರಿದ ಪರಿಹಾರ ಕಾರ್ಯಾಚರಣೆಯ ಭಾಗವಾಗಿ ಹಲವು ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ 300 ಪ್ರವಾಸಿಗರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದರು. ರಸ್ತೆ ಪುನಶ್ಚೇತನ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಗುಡ್ಡಗಾಡು ಪ್ರದೇಶದಲ್ಲಿ ಸುರಿದ ಭಾರಿ ಮಳೆಗೆ ಭೂಕುಸಿತ ಸಂಭವಿಸಿದೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿಕೊಂಡಿದ್ದಾರೆ. ರಸ್ತೆ ಮಧ್ಯೆ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!