ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿಯಲ್ಲಿ ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಸುರಿಯುತ್ತಿದೆ.
ವಿಧಾನಸೌಧ, ಕೆ.ಆರ್. ಮಾರ್ಕೆಟ್, ಮೆಜೆಸ್ಟಿಕ್, ಮಲ್ಲೇಶ್ವರ, ಯಶವಂತಪುರ, ಮತ್ತಿಕೆರೆ, ಗೊರುಗುಂಟೆಪಾಳ್ಯ ಸುತ್ತಮುತ್ತ ಮಳೆಯಾಗುತ್ತಿದೆ. ಮುಂಗಾರು ಪೂರ್ವ ಮಳೆಯಿಂದಾಗಿ ಬೆಂಗಳೂರು ಕೂಲ್ ಕೂಲ್ ಎನಿಸಿದೆ.
ನಗರದ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಕೆಲವು ಕಡೆ ಹನಿ ಮಳೆಯಾಗುತ್ತಿತ್ತು. ಆದರೆ ಸಾಯಂಕಾಲ ಆಗುತ್ತಿದ್ದಂತೆ ಮಳೆ ಅಬ್ಬರ ಜೋರಾಯಿತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ನೆಲಮಂಗಲ ಸುತ್ತಮುತ್ತ ಜೋರು ಮಳೆಯಾಗಿದೆ. ಗುಡುಗು-ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ.