ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಇದರಿಂದ ಎಲೆಕ್ಟ್ರಾನಿಕ್ಸ್ ಸಿಟಿ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿದೆ.
ಭಾರೀ ಮಳೆಯಿಂದಾಗಿ ಹೊಸೂರು ಬೆಂಗಳೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುಮಾರು ಅರ್ಧ ಕಿಲೋಮೀಟರ್ ರಸ್ತೆಯಲ್ಲಿ ನೀರು ನಿಂತಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕತೆಯಿಂದ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ಜನರು ಪರದಾಟ ನಡೆಸುತ್ತಿದ್ದಾರೆ.
ನಗರದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 9 ರವರೆಗೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 5 ರಿಂದ 9 ರವರಿಗೆ ವ್ಯಾಪಕ ಮಳೆಯಾಗಲಿದೆ.