ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇನ್ನೂ ಹತ್ತು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದು, ವಿಪತ್ತು ನಿರ್ವಹಣೆ, ಅರಣ್ಯ ಮತ್ತು ನೀರಾವರಿ ಇಲಾಖೆಗಳಿಗೆ ಎಚ್ಚರಿಕೆ ವಹಿಸಲಾಗಿದೆ.
ಮಳೆಯಿಂದ ಆಗಿರುವ ಹಾನಿಯನ್ನು ವೀಕ್ಷಿಸಲು ಬಂದಿದ್ದೇನೆ, ಮೈಸೂರು, ಕೊಡಗು, ಹಾಸನಕ್ಕೆ ಭೇಟಿ ನೀಡಿದ್ದೇನೆ, ಪ್ರಾಣ ಕಳೆದುಕೊಂಡವರು, ಮನೆ ಹಾನಿಗೊಳಗಾದವರಿಗೆ ಪರಿಹಾರ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಳೆ ನಿಂತರೆ ರಸ್ತೆ ದುರಸ್ತಿ ಕಾರ್ಯವೂ ನಡೆಯಲಿದೆ, ಇನ್ನು ಹತ್ತು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಅರಣ್ಯ ಇಲಾಖೆ ಹಾಗೂ ನೀರಾವರಿ ಇಲಾಖೆ ತಿಳಿಸಿದೆ ಎಂದು ಹೇಳಿದ್ದಾರೆ.