ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಗುಡ್ಡ ಕುಸಿತಗಳು ಸಂಭವಿಸಿದ್ದು, ಹಲವು ಸಂಚಾರಗಳು ಅಸ್ತವ್ಯಸ್ತಗೊಂಡಿದೆ.
5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯ ಸುರಿಯುತ್ತಿರುವ ಭಾರಿ ಮಳೆಯಿಂದ ನಾಳೆ (ಆಗಸ್ಟ್ 18) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಒಂದೆಡೆ ಕಾಫಿನಾಡನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಇದರ ಜೊತಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ, ಎನ್ ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ,ಖಾಂಡ್ಯ,ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.
ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಮತ್ತು ನರಸಿಂಹರಾಜಪುರ ತಾಲ್ಲೂಕುಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ದಿನಾಂಕ ಆಗಸ್ಟ್ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಹಾಗೂ 34ರ ಅಧಿಕಾರದಡಿ ರಜೆ ಘೋಷಿಸಲಾಗಿದೆ.