ರಾಜ್ಯದ ಮಳೆ ಅಬ್ಬರ: ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಮಳೆ ಅಬ್ಬರ ಜೋರಾಗುತ್ತಿದ್ದು, ಮುಂದಿನ 4 ದಿನ ಇನ್ನಷ್ಟು ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಆ.4 ಮತ್ತು ಆ.5ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು ಹರಿಯುತ್ತಿರುವುದರಿಂದ ಸಮುದ್ರ ಮತ್ತು ನದಿ ತೀರದ ನಿವಾಸಿಗಳಿಗೆ ಹಾಗೂ ಮೀನುಗಾರಿಕೆ ನಡೆಸದಂತೆ ಇಲಾಖೆ ಎಚ್ಚರಿಕೆ ನೀಡಿದೆ.

ಚಿಕ್ಕಬಳ್ಳಾಪುರ, ಬೆಳಗಾವಿ, ಹಾವೇರಿಯಲ್ಲಿ ಮುಂದಿನ ಎರಡು ದಿನ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರದಲ್ಲಿ ಆ.4ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!