ರಾಜ್ಯದಲ್ಲಿ ಏಪ್ರಿಲ್ 6ರ ವರೆಗೆ ಭಾರೀ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಮತ್ತೆ ಮಳೆ ಬರುವ ಮುನ್ಸೂಚನೆವಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 6 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಬೆಂಗಳೂರು, ಉತ್ತರ ಕನ್ನಡ,ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಕೂಡ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!