Monday, July 4, 2022

Latest Posts

ರಾಜ್ಯದ ಹಲವೆಡೆ ಡಿ. 4ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದಿನಿಂದ ಡಿ.4 ರವರೆಗೆ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕ ನ್ನಡ, ಉಡುಪಿ ಸೇರಿದಂತೆ ಬೆಂಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನದವರೆಗೆ ಮಳೆಯಾಗಲಿದೆ.

ಹಾಗೆಯೇ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಆರಂಭವಾಗಿದೆ. ಕರಾವಳಿ ತೀರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss