ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ ಮುಂದಿನ 3 ಗಂಟೆಗಳಲ್ಲಿ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಇಲಾಖೆ ಹೇಳಿದೆ.
ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ನೀಡಿದ್ದು, ಕರ್ನಾಟಕದ ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಉಳಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿಮೀ ತಲುಪುವ ಸಾಧ್ಯತೆಯಿದ್ದು, ಸಾಧಾರಣ ಮಳೆಯಾಗಲಿದೆ.