ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ: ‘ಅಲರ್ಟ್ ಆಗಿರಿ’ ಎಂದ ಹವಾಮಾನ ಇಲಾಖೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುವ ಪರಿಸ್ಥಿತಿ ಇದ್ದು, ಈ ಹಿನ್ನೆಲೆ ಮಹಾರಾಷ್ಟ್ರದಿಂದ ಉತ್ತರ ತಮಿಳುನಾಡಿನವರೆಗೆ ಹಾಗೂ ಕರ್ನಾಟಕದ ಒಳಭಾಗದವರೆಗೆ ಮಳೆಯಾಗಲಿದೆ.

ವಾಯುಭಾರ ಕುಸಿತದ ಪರಿಣಾಮದಿಂದಾಗಿ, ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

ರಾಜಧಾನಿ ಬೆಂಗಳೂರು ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಇನ್ನು ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. 4 ದಿನಗಳ ಕಾಲ ಈ ಭಾಗದಲ್ಲಿ ಹೆಚ್ಚಿನ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!