WEATHER | ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಭಾರಿ ಮಳೆ, ಲಿಸ್ಟ್‌ನಲ್ಲಿ ನಿಮ್ಮೂರು ಇದ್ಯಾ ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹುಕ್ಕೇರಿ, ಕಾರ್ಕಳ, ಬೆಳಗಾವಿ, ನಿಪ್ಪಾಣಿ, ಕಮ್ಮರಡಿ, ಆನವಟ್ಟಿ, ಜಯಪುರ, ರಾಯ್​ಭಾಗ್, ಧಾರವಾಡ, ಕಲಘಟಗಿ, ಬೈಲಹೊಂಗಲ, ಹಿಡಕಲ್, ಹುಬ್ಬಳ್ಳಿ, ಚಿಕ್ಕೋಡಿ, ನಾಪೋಕ್ಲು, ಶೃಂಗೇರಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!