ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 24ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆ ತ್ರೀವತೆ ಹೆಚ್ಚು ಇರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಾಳೆ ( ಜುಲೈ 24ರಂದು) ಗುರುವಾರ ಉಡುಪಿ ಜಿಲ್ಲೆಯ ಅಂಗವಾಡಿ, ಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ , ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ
ಕರ್ನಾಟಕ ರಾಜ್ಯದ ಕರಾವಳಿ ತೀರದಲ್ಲಿ ಜುಲೈ 23 ರಿಂದ 27 ರವರೆಗೆ, ಜೋರಾದ ಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಪ್ರತಿ ಗಂಟೆಗೆ 60 ಕಿ.ಮೀ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಉಲ್ಬಣಗೊಳ್ಳಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.