ಹೊಸದಿಗಂತ ವರದಿ,ಕಾರವಾರ :
ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.24 ರ ಮಧ್ಯಾಹ್ನ 1 ಗಂಟೆಯಿಂದ ಜು.26 ರ ಬೆಳಿಗ್ಗೆ 08.30 ರವರೆಗೆ ಭಾರಿ ಮಳೆಯಾಗುವ ಸೂಚನೆ ಇರುವ ಹಿನ್ನೆಲೆಯಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಪದವಿ ಪೂರ್ವ ಕಾಲೇಜುಗಳಿಗೆ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಜು. 25 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ