ಹೊಸದಿಗಂತ ವರದಿ,ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಕೂಡ ಘೋಷಿಸಿದೆ.
ಇದೀಗ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಜುಲೈ 25 ರಂದು ಮಂಗಳವಾರ 1 ರಿಂದ12 ನೇ ತರಗತಿವರೆಗೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಾಳಿಕಟ್ಟಿ ಆದೇಶ ಹೊರಡಿಸಿದ್ದಾರೆ.