ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಹೊಸದಿಗಂತ ವರದಿ,ಅಂಕೋಲಾ:

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಕುರಿತು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ನೀಡಿದೆ .

ಈ ಹಿನ್ನೆಲೆ ಶಾಲಾ ಮಕ್ಕಳ ಹಿತ ದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ ಮತ್ತು ಭಟ್ಕಳ ತಾಲೂಕುಗಳ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜು, ಐ.ಟಿ.ಐ ,ಡಿಪ್ಲೊಮಾ ಕಾಲೇಜುಗಳಿಗೆ ಅಗಸ್ಟ್ 2 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!