spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ: ಕೇಂದ್ರದಿಂದ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಿಂದ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಿಎಂ ಮಮತಾ ಬ್ಯಾನರ್ಜಿಗೆ ದೂರವಾಣಿ ಕರೆ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಪಶ್ಚಿಮ ಬಂಗಾಳದ ವಿವಿಧ ಜಲಾಶಯಗಳು ತುಂಬಿ ಹರಿಯುತ್ತಿವೆ. ರಾಜ್ಯದ ಎಲ್ಲಾ ಜಲಾಶಯಗಳಿಂದ ನೀರು ಹೊರಗೆ ಬಿಟ್ಟಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಜನರನ್ನು ಉಳಿಸಲು ಬೇಕಾದ ಅಗತ್ಯ ನೆರವು ನೀಡುತ್ತೇನೆ ಎಂದು ಸಿಎಂ ಮಮತಾ ಬ್ಯಾನರ್ಜಿಗೆ ಭರವಸೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನು, ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಲ್ಲಿನ ಉದಯ ನಾರಾಯಣಪುರದಲ್ಲಂತೂ ಭಾರೀ ಹಾನಿ ಉಂಟಾಗಿದೆ. ಈಗಾಗಲೇ ಮಮತಾ ಬ್ಯಾನರ್ಜಿ ಇಲ್ಲಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss