ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ. ಕಳೆದ ಒಂದು ವಾರದಿಂದ ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವೆಡೆ ಮಳೆ ಅಬ್ಬರ ಮುಂದುವರೆದಿದೆ.
ಗುಡುಗು, ಗಾಳಿ ಜೊತೆಗೆ ಸುರಿಯುತ್ತಿರುವ ಮಳೆ ರಾಜ್ಯದ ಜನರನ್ನ ಸಂಕಷ್ಟಕ್ಕೆ ತಳ್ಳಿದೆ. ಕರ್ನಾಟಕದಲ್ಲಿ ಇನ್ನೂ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 11 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.