ರಾಜಧಾನಿಯಲ್ಲಿ ವರುಣನ ಆರ್ಭಟ: ಮೆಜೆಸ್ಟಿಕ್, ವಿಧಾನಸೌಧ ಸುತ್ತಮುತ್ತ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಇಂದು ಮತ್ತೆ ಅಬ್ಬರಿಸಿದ್ದಾನೆ. ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆ ಸುರಿದಿದೆ. ಇದರಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪ್ರಮುಖ ರಸ್ತೆಗಳು ಜಲಾವೃತ; ಪ್ರಯಾಣಿಕರ ಪರದಾಟ ನಗರದ ಕೇಂದ್ರ ಭಾಗಗಳಾದ ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್, ಕೆ.ಆರ್. ಸರ್ಕಲ್ ಹಾಗೂ ವಿಧಾನಸೌಧ ಸುತ್ತಮುತ್ತ ಭಾರೀ ಮಳೆಯಾಗಿದೆ. ಇದ್ದಕ್ಕಿದ್ದಂತೆ ಸುರಿದ ಮಳೆಯಿಂದಾಗಿ ರಸ್ತೆಗಳ ಮೇಲೆ … Continue reading ರಾಜಧಾನಿಯಲ್ಲಿ ವರುಣನ ಆರ್ಭಟ: ಮೆಜೆಸ್ಟಿಕ್, ವಿಧಾನಸೌಧ ಸುತ್ತಮುತ್ತ ಭಾರೀ ಮಳೆ