ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಪಶ್ಚಿಮ ಘಟ್ಟ ಪ್ರದೇಶದಲ್ಲೂ ವರುಣ
ಆರ್ಭಟಿಸಿದ್ದಾನೆ.
ಬೆಳ್ತಂಗಡಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿಶಿಲ ಗ್ರಾಮದಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಾಲಯದ ಸಂಪರ್ಕ ರಸ್ತೆ ಮುಳುಗಡೆಯಾಗಿದ್ದು, ಹೀಗಾಗಿ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ವ್ಯಾಪ್ತಿಯ ಜನತೆಗೆ ಶಿಶಿಲ ಗ್ರಾಮ ಪಂಚಾಯತ್ ಎಚ್ಚರಿಕೆ ನೀಡಿದೆ.