October 17, 2026
Saturday, October 17, 2026
spot_img

WEATHER | ಇಂದಿನಿಂದ 4 ದಿನಗಳವರೆಗೆ ಕರ್ನಾಟಕದ ಹಲವೆಡೆ ಭಾರೀಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ 4 ದಿನಗಳವರೆಗೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ಜಿಲ್ಲೆಗಲ್ಲಿ ಗುಡುಗು ಸಹಿತ ವರುಣ ಅಬ್ಬರಿಸಲಿದ್ದಾನೆ.

ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ಮಂಗಳೂರು, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಯಾದಗಿರಿ, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read