ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಬಹುತೇಕ ಭಾಗಗಳಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕಲ್ಯಾಣ ಕರ್ನಾಟಕ ಭಾಗ ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟು 24 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಪ್ರದೇಶವಾರು ಮಳೆ ಮುನ್ಸೂಚನೆ
ಕರಾವಳಿ: ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ನಿರೀಕ್ಷೆಯಿದೆ. ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 17 ರಿಂದ 19 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಹಳೇ ಮೈಸೂರು ಮತ್ತು ದಕ್ಷಿಣ ಒಳನಾಡು: ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಧ್ಯ ಮತ್ತು ಉತ್ತರ ಒಳನಾಡು: ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.
ಶುಷ್ಕ ವಾತಾವರಣ: ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ರಾಜಧಾನಿ ಬೆಂಗಳೂರಿಗೆ ಭಾರಿ ಮಳೆ ಆಘಾತ!
ರಾಜಧಾನಿ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗುವ ಪ್ರಬಲ ಸಾಧ್ಯತೆಯಿದೆ.
ಮಳೆಯ ಸಾಧ್ಯತೆ: ಶೇ. 80 ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆಯಿದೆ.
ಗಾಳಿಯ ವೇಗ: ಗಂಟೆಗೆ 14-20 ಕಿ.ಮೀ. ಇರಲಿದೆ.
ತಾಪಮಾನ: ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20-21 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ.

