ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಇನ್ನು ಮುಂದಿನ 3 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.