ಹೊಸದಿಗಂತ ವರದಿ ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.17ರವರೆಗೆ ಬಿರುಗಾಳಿ ಸಹಿತ ಮಳೆ ಇರುವ ಕಾರಣ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17 ರ ವರೆಗೆ ಬಿರುಗಾಳಿ ಭಾರೀ ಮಳೆ ಕುರಿತಂತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಈ ಸಂದರ್ಭದಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ.
ಈ ಕಾರಣದಿಂದ ಇಂದು ಜೂನ್ 12 ರಂದು ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದು ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.