Tuesday, June 6, 2023

Latest Posts

ಅಫ್ಘಾನಿಸ್ತಾನದಲ್ಲಿ ಭಾರೀ ಹಿಮ ಮಳೆ: ತುರ್ತು ಪರಿಸ್ಥಿತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನದಲ್ಲಿ ಹಿಮ ಹಾಗೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹೀಗಾಗಿ ಅಲ್ಲಿನ ಸರಕಾರ ತುರ್ತು ಪರಿಸ್ಥಿತಿ ಘೋಷಿಸಿದೆ.
ವಿಪತ್ತು ನಿರ್ವಹಣಾ ಸಚಿವಾಲಯದ ಅಧಿಕಾರಿ ಫ್ರೀ ಆಫ್ ಅಲ್ಲಿನ ರೇಡಿಯೊಂದಿಗೆ ಮಾಹಿತಿ ನೀಡಿದ್ದು, ಪ್ರತಿಕೂಲ ಹವಾಮಾನ ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಈ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಅಗತ್ಯ ದಿನಬಳಕೆಯ ವಸ್ತುಗಳನ್ನು ಸಾಗಿಸಲಾಗುತ್ತಿದೆ. ಅವರಿಗೆ ಅಗತ್ಯ ವಸ್ತುಗಳು ಸಿಗುವಂತೆ ಮಾಡಬೇಕು ಎಂದು ಸೂಚಿಸಿದ್ದಾರೆ.
ಅಲ್ಲಿನ 32 ಪ್ರಾಂತ್ಯಗಳಲ್ಲಿ ಭಾರೀ ಹಿಮದ ಮಳೆಯಾಗುತ್ತಿದೆ.ರಸ್ತೆಗಳು ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಈಗಾಗಲೇ ಹಿಮದ ಮಳೆಗೆ ಸಿಲುಕಿ 26 ಜನ ಗಾಯಗೊಂಡು, 7 ಜನ ಸಾವನ್ನಪ್ಪಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!