ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿರುವ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಹಿಮಪಾತ ಸಂಭವಿಸಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
12,000 ಅಡಿ ಎತ್ತರದ ಸಿಯಾಚಿನ್ ಬೇಸ್ ಕ್ಯಾಂಪ್ ಪ್ರದೇಶದಲ್ಲಿ ಭಾನುವಾರ ಹಿಮಪಾತ ಸಂಭವಿಸಿದ್ದು, ಇಬ್ಬರು ಅಗ್ನಿವೀರರು ಸೇರಿದಂತೆ ಮೂವರು ಸೈನಿಕರು ಸಿಕ್ಕಿಬಿದ್ದಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಹಿಮಪಾತದಲ್ಲಿ ಸಿಲುಕಿದ್ದ ಸೈನಿಕರ ಶವಗಳನ್ನು ಹೊರತೆಗೆಯಲಾಯಿತು ಎಂದು ಅವರು ತಿಳಿಸಿದ್ದಾರೆ.