ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇದಾರನಾಥನ ದರುಶನ ಪಡೆಯಲು ತೆರಳಿದ್ದ ಮಂದಿಗೆ ಭಯವಾಗುವಂಥ ದೃಶ್ಯವೊಂದು ಕಾಣಸಿಕ್ಕಿದೆ.
ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಗಾಂಧಿ ಸರೋವರ ಬೆಟ್ಟಗಳಿಂದ ಭಾರೀ ಮಳೆ ಸುರಿದಿದ್ದು, ಮುಂಜಾನೆ 5 ಗಂಟೆ ಸುಮಾರಿಗೆ ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ ಸಂಭವಿಸಿದೆ ಎಂದು ರುದ್ರಪ್ರಯಾಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಶಾಖ ಅಶೋಕ್ ತಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
VIDEO | Uttarakhand: An avalanche occurred over Gandhi Sarovar in Kedarnath. No loss of life and property was reported. More details are awaited. pic.twitter.com/yfgTrYh0oc
— Press Trust of India (@PTI_News) June 30, 2024