ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಜೋಜಿಲಾ ಪಾಸ್ನ ಲಡಾಖ್ ಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಪ್ರವಾಸಿಗರ ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಇದರಿಂದ ಜಮ್ಮು-ಕಾಶ್ಮೀರ ನಡುವೆ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಈ ಕುರಿತು ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಮಾಹಿತಿ ನೀಡಿದ್ದು, ಜೋಜಿಲಾದಲ್ಲಿ ನಡೆದ ಹಿಮಪಾತ ದುರದೃಷ್ಟಕರ. ಈಗಾಗಲೇ ಕಾರ್ಗಿಲ್ನ ಡಿಸಿ ಮತ್ತು ಎಸ್ಎಸ್ಪಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಗಳನ್ನು ಸಜ್ಜುಗೊಳಿಸಲು ಸೂಚಿಸಿದ್ದೇನೆ. ಎಲ್ಲಾ ಸರ್ಕಾರಿ ಸಂಸ್ಥೆಗಳು ಎಚ್ಚರಿಕೆ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.



