ಮೇಖ್ರಿ ವೃತ್ತದಿಂದ ಎಂವಿಐಟಿ ಕ್ರಾಸ್​ವರೆಗೆ ಭಾರಿ ವಾಹನ, ಖಾಸಗಿ ಬಸ್ ಸಂಚಾರ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯಲಹಂಕ ವಾಯುಸೇನಾ ನೆಲೆಯಲ್ಲಿ ಫೆಬ್ರವರಿ 10 ರಿಂದ 14ರವರೆಗೆ ಏರೋ ಇಂಡಿಯಾ-2025  ವೈಮಾನಿಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ವೈಮಾನಿಕ ಪ್ರರ್ದಶನಕ್ಕೆ ಸೋಮವಾರ (ಫೆ.10) ಬೆಳಗ್ಗೆ 9ಗಂಟೆ ಕೇಂದ್ರ ಸಚಿವ ರಾಜನಾಥ್​ ಸಿಂಗ್​ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಹಲವಾರು ಗಣ್ಯರು ಹಾಗು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಸಂಬಂಧ ಬೆಂಗಳೂರು ನಗರದಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್​ ನಿಷೇಧಿಸಲಾಗಿದೆ. ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 10ರಿಂದ 14ರವರೆಗೆ ಬೆಳಗ್ಗೆ 5 ಗಂಟೆಯಿಂದ ರಾತ್ರಿ 10-00 ರವರೆಗೆ ಮೇಖ್ರಿ ವೃತ್ತದಿಂದ ಎಂವಿಐಟಿ ಕ್ರಾಸ್​ವರೆಗೆ, ಬಳ್ಳಾರಿ ರಸ್ತೆಯಲ್ಲಿ, ಗೊರಗುಂಟೆಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್​ವರೆಗೆ ಹಾಗೂ ನಾಗವಾರ ಜಂಕ್ಷನ್‌ನಿಂದ ರೇವಾ ಕಾಲೇಜ್ ಜಂಕ್ಷನ್​ವರೆಗೆ ಮತ್ತು ಹೆಸರಘಟ್ಟ, ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ಕಡೆಗೆ ತೆರಳುವ ಲಾರಿ, ಟ್ರಕ್, ಖಾಸಗಿ ಬಸ್ಸುಗಳು ಹಾಗೂ ಇತರೆ ಭಾರೀ ಸರಕು ಸಾಗಾಣಿಕೆಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!