October 13, 2026
Tuesday, October 13, 2026
spot_img

ಕಸ್ತೂರಿರಂಗನ್ ವರದಿಗೆ ವಿಧಾನಸಭೆಯಲ್ಲಿ ಹೆಬ್ಬಾರ್ ವಿರೋಧ: ಉತ್ತರ ಕನ್ನಡದ ಜನಹಿತಕ್ಕೆ ಧಕ್ಕೆ ಎಂದ ಶಾಸಕ

ಹೊಸದಿಗಂತ ವರದಿ ಯಲ್ಲಾಪುರ:

ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನಡೆಯುತ್ತಿರುವ ವಿಧಾನಸಭೆಯ ವಿಶೇಷ ಕಲಾಪದಲ್ಲಿ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿದರು.

ಕಸ್ತೂರಿರಂಗನ್ ವರದಿ ಜಾರಿಯಿಂದ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ಮತ್ತು ಜನವಸತಿ ಪ್ರದೇಶಗಳ ಮೇಲೆ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸದನದಲ್ಲಿ ವಿಸ್ತೃತವಾಗಿ ಪ್ರಸ್ತಾಪಿಸಿದ ಅವರು, ಜಿಲ್ಲೆಯ ಜನರ ಹಿತಾಸಕ್ತಿ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ವರದಿಯನ್ನು ಸಂಪೂರ್ಣವಾಗಿ ವಿರೋಧಿಸುವುದಾಗಿ ಸ್ಪಷ್ಟಪಡಿಸಿದರು.

ಇದೇ ವೇಳೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಹೊರಡಿಸಿರುವ ಸರ್ಕಾರಿ ಭೂಮಿಯಲ್ಲಿರುವ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಡುವ ಆದೇಶವನ್ನು ಹಿಂಪಡೆಯಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಈ ಆದೇಶದಿಂದ ಗ್ರಾಮೀಣ ಜನರಿಗೆ ತೊಂದರೆಯಾಗಲಿದ್ದು, ಜನಪರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Must Read