Thursday, September 29, 2022

Latest Posts

ಹೆಬ್ಬುಲಿ ನಟಿ ಅಮಲಾ ಪೌಲ್​​​ಗೆ ವಂಚನೆ, ಲೈಂಗಿಕ ಕಿರುಕುಳ: ಸ್ನೇಹಿತನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಿಚ್ಚ ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದ ನಟಿ ಅಮಲಾ ಪೌಲ್​​​​ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಬಂಧನ ಮಾಡಲಾಗಿದೆ.

ಹಣ ವಂಚನೆ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಖ್ಯಾತ ನಟಿ ಅಮಲಾ ಪೌಲ್​ ಸ್ನೇಹಿತ ರಾಜಸ್ಥಾನದ ಯುವಕನ ಬಂಧನ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮಿಳುನಾಡಿನ ವಿಲ್ಲುಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ 15 ಪುಟಗಳ ದೂರು ಸಲ್ಲಿಸಿದ್ದು, ಚಿತ್ರ ನಿರ್ಮಾಣ ಮಾಡುವ ಉದ್ದೇಶದಿಂದ ನನ್ನ ಬಳಿ ಕೋಟ್ಯಂತರ ರೂಪಾಯಿ ಹಣ ಪಡೆದುಕೊಂಡು ವಾಪಸ್​​ ಕೊಟ್ಟಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರ ಜೊತೆಗೆ ಖಾಸಗಿ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆಂದು ಹೇಳಿದ್ದಾರೆ.
ವಿಲ್ಲುಪುರಂನ ಆರೋವಿಲ್ಲೆ ಬಳಿಯ ಸ್ವಂತ ಮನೆಯಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ನಟಿ ತಿಳಿಸಿದ್ದಾರೆ.

ಬಂಧಿತನನ್ನ ರಾಜಸ್ಥಾನದ ಜೈಪುರ ಮೂಲದ ಬವೇಂದರ್ ಸಿಂಗ್ ದತ್​ ಎಂದು ಗುರುತಿಸಲಾಗಿದೆ. ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬವೇಂದರ್​ ಸೇರಿದಂತೆ 12 ಜನರ ವಿರುದ್ಧ ವಿಲ್ಲುಪುರಂ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಳಿದ 11 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!