Friday, February 3, 2023

Latest Posts

ಹೀರಾಬೆನ್‌ ಮೋದಿ ನಿಧನ: ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಯೋಗಿ ಸೇರಿದಂತೆ ರಾಜಕೀಯ ಗಣ್ಯರ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿಯವರ ಹೀರಾಬೆನ್‌ ಮೋದಿ ಅನಾರೋಗ್ಯದ ಕಾರಣದಿಂದ ಇಂದು ನಿಧನರಾಗಿದ್ದಾರೆ. ಹೀರಾಬೆನ್‌ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಸೇರಿದಂತೆ ಹಲವು ರಾಜಕೀಯ ಗಣ್ಯರು ತಮ್ಮ ಸಂತಾಪ ಸೂಚಿಸಿದ್ದಾರೆ.

ʻಮಾತಾಶ್ರೀ ಹೀರಾಬೆನ್‌ ನಿಧನದಿಂದ ನನಗೆ ಅತೀವ ದುಃಖವಾಗಿದೆ. ತಾಯಿಯ ಸಾವು ಜೀವನದಲ್ಲಿ ತುಂಬಲಾಗದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಪ್ರಧಾನಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ!ʼ ಎಂದು ರಾಜನಾಥ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ

ಹಾಗೆಯೇ ಗೃಹ ಸಚಿವ ಅಮಿತ್‌ ಶಾ ಕೂಡ ಹೀರಾಬೆನ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ʻಕುಟುಂಬ ಪೋಷಣೆಗಾಗಿ ಹೀರಾಬೆನ್ ಅವರು ಎದುರಿಸಿದ್ದ ಹೋರಾಟ ಎಲ್ಲರಿಗೂ ಮಾದರಿಯಾಗಿದೆ. ಅವರ ತ್ಯಾಗದ ತಪಸ್ವಿ ಜೀವನ ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತದೆ. ಈ ದುಃಖದ ಸಮಯದಲ್ಲಿ ಇಡೀ ರಾಷ್ಟ್ರವು ಪ್ರಧಾನಿ ಮೋದಿ ಮತ್ತು ಅವರ ಕುಟುಂಬದೊಂದಿಗೆ ನಿಂತಿದೆ. ಕೋಟಿ ಕೋಟಿ ಜನರ ಪ್ರಾರ್ಥನೆ ನಿಮ್ಮೊಂದಿಗಿದೆ. ಎಂದು ಟ್ವೀಟ್‌ ಮಾಡಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಸಹ ಮೋದಿ ಅವರ ತಾಯಿ ನಿಧನದ ಸುದ್ದಿ ಕೇಳಿ ತಮ್ಮ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

ಮಗನಿಗೆ ತಾಯಿಯೇ ಇಡೀ ಜಗತ್ತು. ತಾಯಿಯ ಸಾವು ಮಗನಿಗೆ ಭರಿಸಲಾಗದ ಮತ್ತು ತುಂಬಲಾರದ ನಷ್ಟವಾಗಿದೆ. ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾನ್ವಿತ ತಾಯಿಯ ನಿಧನವು ತುಂಬಾ ದುಃಖಕರವಾಗಿದೆ. ಅಗಲಿದ ಪುಣ್ಯಾತ್ಮರಿಗೆ ಶ್ರೀರಾಮ ಅವರ ಪುಣ್ಯ ಪಾದದಲ್ಲಿ ಸ್ಥಾನ ನೀಡಲಿ. ಎಂದು ಯೋಗಿ ಟ್ವೀಟ್‌ ಮಾಡಿದ್ದಾರೆ.

ಹಾಗೆಯೇ ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌, ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚವ್ಹಾಣ್‌, ಅಸ್ಸಾಂ ಸಿಎಂ ಹಿಂತ್‌ ಬಿಸ್ವಾ ಶರ್ಮಾ, ಗುಲಾಂ ನಬಿ ಆಜಾದ್‌, ಜೆಪಿ ನಡ್ಡಾ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಮುಖ ರಾಜಕೀಯ ನಾಯಕರು ತಮ್ಮ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!