ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಮೂವರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ನಡೆದಿದ್ದು, ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಕಲ್ಪನೆಯ ನಿವಾಸಿ ಪೂವಪ್ಪ (61) ಎಂಬವರಿಗೆ ಗಂಭೀರ ಗಾಯಗಳಾಗಿವೆ. ಇನ್ನುಳಿದಂತೆ ಮಹೇಶ್ ಮತ್ತು ಗೋಪಾಲ್ ಎಂಬ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಪೂವಪ್ಪ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಪನೆಯಿಂದ ಬಿ.ಸಿ. ರೋಡ್‌ಗೆ ಬರಲು ಕಲ್ಪನೆ ಬಸ್ ನಿಲ್ದಾಣಕ್ಕೆ ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.