spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು ಜಿಲ್ಲೆಗೆ ಹೆಲಿ ಟೂರಿಸಂ ಯೋಜನೆ: ಸಚಿವ ಆನಂದ ಸಿಂಗ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಹೆಲಿ ಟೂರಿಸಂ ಯೋಜನೆ ಅನುಷ್ಠಾನಗೊಳಿಸುವ ಪ್ರಸ್ತಾವನೆ ಸರಕಾರದ ಮುಂದಿದೆ ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಸಚಿವ ಆನಂದ ಸಿಂಗ್ ತಿಳಿಸಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ವಿಷಯ ಪ್ರಸ್ತಾಪಿಸಿ, ಕೊಡಗು ಜಿಲ್ಲೆಯಲ್ಲಿ ಹೆಲಿ ಟೂರಿಸಂ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆಯೇ, ಅನುಷ್ಠಾನಗೊಳಿಸುತ್ತಿದ್ದಲ್ಲಿ, ಜಿಲ್ಲೆಯ ಎಷ್ಟು ಪ್ರವಾಸಿ ತಾಣಗಳನ್ನು ಹೆಲಿ ಟ್ಯೂರಿಸಂ ಯೋಜನೆಯಡಿ ಪರಿಗಣಿಸಲಾಗಿದೆ? ಜಿಲ್ಲೆಯಲ್ಲಿ ಈ ಯೋಜನೆಯಡಿ ಪರಿಗಣಿಸಿರುವ ಪ್ರವಾಸಿ ತಾಣಗಳ ಅಭಿವೃದ್ಧಿಗೆ ನೀಡಿರುವ ಅನುದಾನದ ವಿವರಗಳು ಹಾಗೂ ಕೈಗೊಂಡಿರುವ ಕಾಮಗಾರಿಗಳ ಸಂಪೂರ್ಣ ವಿವರ ಒದಗಿಸಬೇಕು ಎಂದು ಮನವಿ ಮಾಡಿದರು.
ಇದಕ್ಕುತ್ತರಿಸಿದ ಸಚಿವ ಆನಂದ ಸಿಂಗ್,ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಇಲಾಖೆಯಾಗಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿನ ಪ್ರವಾಸಿಗರನ್ನು ಕರ್ನಾಟಕದತ್ತ ಸೆಳೆಯಲು ಕರ್ನಾಟಕದಲ್ಲಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೆಲಿಟೂರಿಸಂ ಅನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದೆ.
ಪ್ರಸ್ತುತ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ಅನುಕೂಲವಾಗುವಂತೆ ಕರಡು ಹೆಲಿ ಟೂರಿಸಂ ಸರ್ಕ್ಯೂಟ್ ನ್ನು ಸಿದ್ದಪಡಿಸಲಾಗುತ್ತಿದ್ದು, ಈ ಕರಡು ಸರ್ಕ್ಯೂಟ್ ನಲ್ಲಿ ಕೊಡಗು ಜಿಲ್ಲೆಯನ್ನು ಸಹ ಸೇರ್ಪಡೆಗೊಳಿಸಲು ಪ್ರಸ್ತಾವನೆ ಇದೆ. ಸಮಾಲೋಚಕ ಸೇವೆಯನ್ನು ಪಡೆಯಲು ನಿರ್ವಾಹಕರನ್ನು ಆಯ್ಕೆ ಮಾಡುವ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಹೆಲಿ ಟೂರಿಸಂ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಪ್ರಸ್ತಾವನೆ ಆರಂಭಿಕ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss