Thursday, July 7, 2022

Latest Posts

ಹೆಲಿಕಾಪ್ಟರ್ ದುರಂತ: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತಲುಪಿದ ಕ್ಯಾ. ವರುಣ್​ ಸಿಂಗ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಕುನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ವರುಣ್​ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ.
ವರುಣ್ ಸಿಂಗ್ ಅವರಿದ್ದ ಏರ್ ಆಂಬುಲೆನ್ಸ್ ಸೂಲೂರು ವಾಯುನೆಲೆಯಿಂದ ಗುರುವಾರ ಸಂಜೆ ಬೆಂಗಳೂರು ತಲುಪಿದ್ದು, . ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದ ಏರ್​ ಆಂಬುಲೆನ್ಸ್​ನಿಂದ ವರುಣ್ ಸಿಂಗ್ ಅವರನ್ನು ಓಲ್ಡ್​ ಏರ್​ಪೋರ್ಟ್​ ರಸ್ತೆಯಲ್ಲಿರುವ ಕಮಾಂಡೊ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಕಮಾಂಡೋ ಆಸ್ಪತ್ರೆ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss