ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್‌ ಗಳ ದುರಂತ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಛತ್ತೀಸ್‌ಗಢದ ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಅಪಘಾತದಲ್ಲಿ ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎ.ಪಿ.ಶ್ರೀವಾಸ್ತವ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೈಲಟ್‌ಗಳು ಆಗಸದಿಂದ ಹೆಲಿಕಾಪ್ಟರ್‌ ಇಳಿಸಲು ಯತ್ನಿಸಿದಾಗ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಇಬ್ಬರೂ ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್‌ ಬೇರೆ ಯಾವುದೇ ಪ್ರಯಾಣಿಕರಿರಲಿಲ್ಲ.
ಮನ ಪೊಲೀಸ್ ಠಾಣೆ ವ್ಯಾಪ್ತಿಯ ರಾಯ್‌ಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ರಾತ್ರಿ 9:10 ರ ಸುಮಾರಿಗೆ ವಿಮಾನ ಹಾರಾಟದ ಅಭ್ಯಾಸದ ವೇಳೆ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಶಾಂತ್ ಅಗರವಾಲ್ ತಿಳಿಸಿದ್ದಾರೆ. ಅಪಘಾತದ ಕಾರಣ ತಿಳಿದುಬಂದಿಲ್ಲ. ಘಟನೆಗೆ ನಿಖರವಾದ ಕಾರಣವನ್ನು ಖಚಿತಪಡಿಸಿಕೊಳ್ಳಲು ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(DGCA) ತನಿಖೆ ಕೈಗೊಂಡಿದೆ.
ಛತ್ತೀಸ್‌ಗಢ ಮುಖ್ಯಮಂತ್ರಿ ದುರಂತದ ಬಗ್ಗೆ ಭೂಪೇಶ್ ಬಘೇಲ್ ದುಃಖ ವ್ಯಕ್ತಪಡಿಸಿ ಪೈಲಟ್‌ಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. “ರಾಯಪುರದ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವ ಸುದ್ದಿ ಕೇಳಿ ಅತೀವ ದುಖಃವಾಗಿದೆ. ಈ ದುರಂತ ಅಪಘಾತದಲ್ಲಿ, ನಮ್ಮ ಪೈಲಟ್‌ಗಳಾದ ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ದುಃಖವನ್ನು ಬರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ಸದಸ್ಯರಿಗೆ ನೀಡಲಿ ಮತ್ತು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ. ಎಂದು ಬಾಘೆಲ್ ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!