Wednesday, October 5, 2022

Latest Posts

ತಾಲಿಬಾನಿಗಳು ತರಬೇತಿ ಪಡೆಯುತ್ತಿದ್ದ ಹೆಲಿಕಾಪ್ಟರ್ ಪತನ: 3 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ತಾಲಿಬಾನ್ ತರಬೇತಿ ಅಭ್ಯಾಸದ ವೇಳೆ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ತಾಲೀಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.
“ತರಬೇತಿಗಾಗಿ ಹಾರಾಟ ನಡೆಸಲಾಗಿದ್ದ ಅಮೆರಿಕದ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಪತನಗೊಂಡಿದೆ” ಎಂದು ರಕ್ಷಣಾ ಸಚಿವಾಲಯದ ವಕ್ತಾರ ಎನಾಯ್ತುಲ್ಲಾ ಖೌರಾಜ್ಮಿ ಹೇಳಿದ್ದಾರೆ. ಘಟನೆಯಲ್ಲಿ ಐದು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಒಂದು ವರ್ಷದ ಹಿಂದೆ ದೇಶವನ್ನು ವಶಪಡಿಸಿಕೊಂಡ ನಂತರ ತಾಲಿಬಾನ್ ಕೆಲವು ಅಮೆರಿಕಾ ನಿರ್ಮಿತ ವಿಮಾನಗಳ ನಿಯಂತ್ರಣವನ್ನು ಪಡೆದುಕೊಂಡಿದೆ. ಆದರೆ ಅದರ ಅವುಗಳಲ್ಲಿ ಎಷ್ಟು ಕಾರ್ಯನಿರ್ವಹಿಸುತ್ತಿವೆ ಎಂಬುದು ಅಸ್ಪಷ್ಟವಾಗಿದೆ. ಅಮೆರಿಕಾ ಪಡೆಗಳು ಕೆಲವು ಮಿಲಿಟರಿ ಯಂತ್ರಾಂಶಗಳನ್ನು ಉದ್ದೇಶಪೂರ್ವಕವಾಗಿ ಹಾನಿಗೊಳಿಸಿ ತೆರಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!