ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆಯ ಬವ್ಧಾನ್ ಪ್ರದೇಶದಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ ಧಾವಿಸಿದೆ. ಬೆಳಗ್ಗೆ ಏಳು ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಂಜು ಈ ಅವಘಡಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ.
ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಅಪಘಾತದ ನಂತರ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ, ಇದರಿಂದಾಗಿ ಮೂವರ ದೇಹವೂ ಸುಟ್ಟು ಕರಕಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆಯೂ ಆದೇಶ ನೀಡಲಾಗಿದೆ. ಈ ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ.
Maharashtra | Two people feared dead in a helicopter crash near Bavdhan in Pune district. Two ambulances and four fire tenders present at the spot.
(Pic Source: Pune Fire Department) https://t.co/3iuStSLkgL pic.twitter.com/mp09RSpP7m
— ANI (@ANI) October 2, 2024