ಗಂಗೋತ್ರಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತ : ಮೃತರ ಸಂಖ್ಯೆ 6ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಉತ್ತರಕಾಶಿ ಜಿಲ್ಲೆಯ ಗಂಗಾನಿ ಬಳಿ ಪತನಗೊಂಡು ಆರು ಪ್ರವಾಸಿಗರು ಮೃತಪಟ್ಟು, ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಸ್‌ಡಿಆರ್‌ಎಫ್ ಮೂಲಗಳಿಂದ ಬಂದ ಮಾಹಿತಿಯ ಪ್ರಕಾರ, ಏರೋಟ್ರಾನ್ಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ವಿಟಿ-ಒಎಕ್ಸ್‌ಎಫ್) ನಿರ್ವಹಿಸುವ, ಕ್ಯಾಪ್ಟನ್ ರಾಬಿನ್ ಸಿಂಗ್ ಪೈಲಟ್ ಮಾಡಿದ ಹೆಲಿಕಾಪ್ಟರ್ ಇಂದು ಬೆಳಗ್ಗೆ 8:50 ಕ್ಕೆ ಡೆಹ್ರಾಡೂನ್‌ನ ಸಹಸ್ತ್ರಧಾರ ಹೆಲಿಪ್ಯಾಡ್‌ನಿಂದ ಆರು ಪ್ರಯಾಣಿಕರೊಂದಿಗೆ ಟೇಕ್ ಆಫ್ ಆಗಿತ್ತು.

ಗಂಗೋತ್ರಿ ಧಾಮದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಖರ್ಸಾಲಿ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು, ರಿಷಿಕೇಶ-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅನಿರೀಕ್ಷಿತವಾಗಿ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here