ಪ್ರವಾಸಿಗರು ತುಂಬಿದ್ದ ಬೀಚ್‌ನಲ್ಲೇ ಹೆಲಿಕಾಪ್ಟರ್ ಪತನ, ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಫ್ಲೋರಿಡಾದಲ್ಲಿನ ಜನಪ್ರಿಯ ಬೀಚ್ ಮಿಯಾಮಿಯಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿದೆ.
ಜನಸಂದಣಿ ಹೆಚ್ಚಿರುವಾಗಲೇ ಹೆಲಿಕಾಪ್ಟರ್ ಪತನವಾಗಿದ್ದು, ಯಾರಿಗೂ ಜೀವಹಾನಿಯಾಗಿಲ್ಲ.
ಜನರಿಂದ ಕೆಲವೇ ಅಡಿಗಳ ದೂರದಲ್ಲಿ ಅವಘಡ ಸಂಭವಿಸಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಸೌತ್ ಬೀಚ್‌ನಲ್ಲಿ ಘಟನೆ ನಡೆದಿದ್ದು, ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದ್ದು, ಜಾಕ್ಸನ್ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!