ಬಿಹಾರದಲ್ಲಿ ಪ್ರವಾಹದ ನೀರಿನಲ್ಲಿ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನ್ನು ಪ್ರವಾಹದ ನೀರಿನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಪ್ರವಾಹ ಪೀಡಿತ ಬಿಹಾರಕ್ಕೆ ಪರಿಹಾರ ಸಾಮಗ್ರಿಗಳನ್ನು ಏರ್ ಡ್ರಾಪ್ ಮಾಡುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ ಮಾಡುತ್ತಿದ್ದಂತೆ ಒಂದು ಭಾಗ ಪ್ರವಾಹದಲ್ಲಿ ಮುಳುಗಿದೆ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರು ಐಎಎಫ್ ಸಿಬ್ಬಂದಿಗಳಿದ್ದರು. ಎಲ್ಲರನ್ನೂ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್ ಮಾತನಾಡಿ, ಪೈಲಟ್‌ನ ಚಾಣಾಕ್ಷತನದಿಂದ ಭಾರೀ ಅನಾಹುತ ತಪ್ಪಿದೆ. ಇಂಜಿನ್ ವಿಫಲವಾದ ಬಳಿಕ ಪೈಲಟ್ ಹೆಲಿಕಾಪ್ಟರ್‌ನ್ನು ಪ್ರವಾಹದ ನೀರಿನಲ್ಲಿ ಇಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!