ಇನ್ಮುಂದೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ: ನಿಯಮ ತಪ್ಪಿದ್ದರೆ ಬೀಳುತ್ತೆ ದಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಈಗಾಗಲೇ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯವಿದ್ದರೂ, ಇದೀಗ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್ ಕಡ್ಡಾಯಗೊಳಿಸಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಇಂದು ಆದೇಶ ಹೊರಡಿಸಿದೆ.
ಈಗ ಈಗ ಹೆಚ್ಚಿನ ಪ್ರಮಾಣದಲ್ಲಿ ಹೆಲ್ಮೆಟ್ ಧರಿಸದ ಕಾರಣಕ್ಕೆ ಅನೇಕ ಮಕ್ಕಳು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗಳು ನಡೆಯುತ್ತಿದೆ. ಈ ಹಿನ್ನೆಲೆಯ4 ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ನಿಯಮಗಳನ್ನು ಸೂಚಿಸಲಾಗಿದೆ.
ಈ ಮೂಲಕ ಮಕ್ಕಳ ಸುರಕ್ಷತೆಗೆ ಕೇಂದ್ರ ಸರಕಾರ ಗಮನಹರಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಹೆಲ್ಮೆಟ್​ಗಳನ್ನು ಉತ್ಪಾದಿಸುವಂತೆ ಹೆಲ್ಮೆಟ್ ಉತ್ಪಾದನಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಒಂದು ವೇಳೆ ಹೊಸ ನಿಯಮದ ಅನುಸಾರ ಮಕ್ಕಳು ಹೆಲ್ಮೆಟ್ ಧರಿಸದಿದ್ದರೆ ಆ ದ್ವಿಚಕ್ರ ವಾಹನದ ಚಾಲಕರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ ಹಾಗೂ 3 ತಿಂಗಳ ಕಾಲ ಲೈಸೆನ್ಸ್​ ರದ್ದುಪಡಿಸಲಾಗುತ್ತದೆ.
ಇದಕ್ಕಾಗಿಯೇ ಕೇಂದ್ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ನಾಲ್ಕು ವರ್ಷ ವಯಸ್ಸಿನ ಮಕ್ಕಳಿಗೂ ಈ ನಿಯಮ ಅನ್ವಯವಾಗುತ್ತದೆ.
ಇನ್ನು ಹೊಸ ನಿಯಮಗಳ ಪ್ರಕಾರ, ಮಕ್ಕಳಿಗೆ ತಯಾರಿಸಲ್ಪಡುವ ಹೆಲ್ಮೆಟ್ ಹಗುರವಾಗಿರಬೇಕು, ವಾಟರ್ ಪ್ರೂಫ್ ಆಗಿರಬೇಕು, ಮೆತ್ತಗಿರಬೇಕು ಮತ್ತು 30 ಕೆಜಿ ಭಾರ ಹೊರುವ ಸಾಮರ್ಥ್ಯವನ್ನು ಹೊಂದಿರಬೇಕು ಎಂದು ಸೂಚಿಸಿದೆ.
ಅದೇ ರೀತಿ ನಿಯಮದ ಪ್ರಕಾರ ದ್ವಿಚಕ್ರ ವಾಹನ ಸವಾರರು ಮಕ್ಕಳೊಂದಿಗೆ ಪ್ರಯಾಣಿಸುವಾಗ ವಾಹನದ ವೇಗ ಗಂಟೆಗೆ 40 ಕಿಮೀ ಮೀರದಂತೆ ನೋಡಿಕೊಳ್ಳುವುದು ಕಡ್ಡಾಯವಾಗಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈ ನಿಯಮದಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿ ಸಚಿವಾಲಯವು ಕರಡು ಅಧಿಸೂಚನೆಯನ್ನು ಹೊರಡಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!