ಹೊಸದಿಗಂತ ಡಿಜಿಟಲ್ ಡೆಸ್ಕ್;
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆಈವರೆಗೂ 300ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಊರಿಗೆ ಊರೇ ಸ್ಮಶಾನವಾಗಿದ್ದು, ಭೂಕುಸಿತದ ಸಂತ್ರಸ್ತರಿಗೆ ನೆರವಿನ ಅವಶ್ಯಕತೆ ಇದೆ. ‘ಮೆಗಾ ಸ್ಟಾರ್’ ಚಿರಂಜೀವಿ, ರಾಮ್ ಚರಣ್ ಅವರು ಜೊತೆಯಾಗಿ 1 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಚಿರಂಜೀವಿ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪಕೃತಿಯ ವಿಕೋಪಕ್ಕೆ ನೂರಾರು ಜನರು ಪ್ರಾಣ ಕಳೆದಕೊಂಡಿದ್ದಕ್ಕೆ ತೀವ್ರ ನೋವು ಉಂಟಾಗಿದೆ. ವಯನಾಡು ದುರಂತದ ಸಂತ್ರಸ್ತರಿಗಾಗಿ ನನ್ನ ಮನ ಮಿಡಿಯುತ್ತಿದೆ. ಚರಣ್ ಮತ್ತು ನಾನು ಜೊತೆಯಾಗಿ ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಸಂತ್ರಸ್ತರ ಬೆಂಬಲಕ್ಕೆ ನಿಲ್ಲುತ್ತೇವೆ. ನೋವಿನಲ್ಲಿ ಇರುವ ಎಲ್ಲರಿಗಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಮೆಗಾ ಸ್ಟಾರ್ ಚಿರಂಜೀವಿ ಅವರು ಬರೆದುಕೊಂಡಿದ್ದಾರೆ.
ಟಾಲಿವುಡ್, ಕಾಲಿವುಡ್ ಮುಂತಾದ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ದೇಣಿಗೆ ನೀಡುತ್ತಿದ್ದಾರೆ.