ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವಿನ ಪ್ರಕ್ಷುಬ್ದತೆ ನಡುವೆ ಭಾರತದ ವಿರುದ್ಧ ದಾಳಿ ನಡೆಸಲು ಕುತಂತ್ರಿ ಪಾಕಿಸ್ತಾನಕ್ಕೆ ಟರ್ಕಿ ಸಹಾಯ ಮಾಡಿತ್ತು ಎಂಬ ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ.
ಟರ್ಕಿ 350 ಕ್ಕೂ ಹೆಚ್ಚು ಡ್ರೋನ್ಗಳನ್ನು ನೀಡಿ ಪಾಕಿಸ್ತಾನಕ್ಕೆ ಸಹಾಯ ಮಾಡಿತ್ತು. ಮಾತ್ರವಲ್ಲದೆ, ಉಗ್ರರ ಜೊತೆಗೂ ಕೈ ಜೋಡಿಸಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ.
ಪಾಕಿಸ್ತಾನವು ಭಾರತದ ವಿರುದ್ಧ ಬೇರಕ್ತಾರ್ ಟಿಬಿ2 ಮತ್ತು ಯಿಹಾ ಡ್ರೋನ್ಗಳನ್ನು ಬಳಸಿದೆ ಎಂದು ವರದಿಯಾಗಿದೆ. ಈ ಡ್ರೋನ್ಗಳನ್ನು ಟರ್ಕಿ ಪಾಕಿಸ್ತಾನಕ್ಕೆ ಪೂರೈಕೆ ಮಾಡಿತ್ತು ಎನ್ನಲಾಗಿದೆ. ಇದೀಗ ಈ ವಿಚಾರ ಬಯಲಾಗುತ್ತಿದ್ದಂತೆ ಟರ್ಕಿಯನ್ನು ಬಹಿಷ್ಕರಿಸಿ ಎಂಬ ಕೂಗು ಕೇಳಿಬರುತ್ತಿದೆ.
ವಿಧಿವಿಜ್ಞಾನದಲ್ಲಿ ಡ್ರೋನ್ಗಳ ಅವಶೇಷಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರಂಭಿಕ ತನಿಖೆಯಲ್ಲಿ ಅವು ಟರ್ಕಿಶ್ ಆಸಿಸ್ಗಾರ್ಡ್ ಸೊಂಗರ್ ಡ್ರೋನ್ಗಳು ಎಂಬುದು ತಿಳಿದುಬಂದಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಆಪರೇಷನ್ ಸಿಂದೂರ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.