Sunday, August 14, 2022

Latest Posts

ಮುಂಬೈ ನೂತನ ಪೊಲೀಸ್ ಕಮಿಷನರ್ ಆಗಿ ಹೇಮಂತ್ ನಗರಾಳೆ ನೇಮಕ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್ ಅವರನ್ನು ಬೇರೆ ಇಲಾಖೆಗೆ ವರ್ಗಾಯಿಸಿದ್ದು, ಹೇಮಂತ್ ನಗರಾಳೆ ಅವರನ್ನು ನೂತನ ಪೊಲೀಸ್ ಕಮಿಷನರ್ ಆಗಿ ಬುಧವಾರ(ಮಾರ್ಚ್) ನೇಮಕ ಮಾಡಲಾಗಿದೆ.
ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಎನ್ ಐಎ ಮುಂಬೈ ಪೊಲೀಸ್, ಎನ್ ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆಯನ್ನು ಬಂಧಿಸಿದ ನಂತರ ಮುಂಬೈ ಪೊಲೀಸ್ ಇಲಾಖೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಪರಮ್ ವೀರ್ ಸಿಂಗ್ ಅವರನ್ನು ವರ್ಗಾಯಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಇಂದು ಘೋಷಿಸಿತ್ತು. ಪರಮ್ ವೀರ್ ಸಿಂಗ್ ಅವರನ್ನು ಹೋಮ್ ಗಾರ್ಡ್ಸ್ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಅನಿಲ್ ದೇಶಮುಖ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss