ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ನ ಮುಖ್ಯಮಂತ್ರಿಯಾಗಿ ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜೆಎಂಎಂ ರಾಷ್ಟ್ರೀಯ ಅಧ್ಯಕ್ಷ ಶಿಬು ಸೊರೆನ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ದೇಶದ ಉನ್ನತ ನಾಯಕರು ಉಪಸ್ಥಿತರಿದ್ದರು.