ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ಇಂದು (ಗುರುವಾರ) ಮೂರನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಚಂಪೈ ಸೊರೆನ್ ಅವರು ಬುಧವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ, ಬುಧವಾರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಹೇಮಂತ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 5 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿರುವ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷರಾದ ಹೇಮಂತ್ ಸೋರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.