ಇನ್ಮುಂದೆ ಮುಖ್ಯಮಂತ್ರಿಯೇ ಚಾನ್ಸಲರ್: ವಿವಿ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಮ್ಮತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಸಂಪುಟ ಸಭೆ ಮಾಡಲಾಗಿದೆ. ಸಂಪುಟ ಸಂಪುಟ ಪುನಾರಚನೆ ಸೇರಿದಂತೆ ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಲಾಗಿದೆ.

ಪ್ರಮುಖವಾಗಿ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್ ಸಿಎಂಗೆ ನೀಡಿದೆ. ಇದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಷ್ಟು ದಿನ ರಾಜ್ಯಪಾಲರು ಚಾನ್ಸಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿ ಚಾನ್ಸಲರ್ ಆಗಲಿದ್ದಾರೆ. ಆ ಮೂಲಕ ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಸಿಎಂಗೆ ನೀಡಲಾಗಿದೆ.

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌.ಕೆ.ಪಾಟೀಲ್​, ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯ. ಶಿಕ್ಷೆ ಹಾಗೂ ದಂಡ ವಿಧಿಸಲು ವಿಧೇಯಕದಲ್ಲಿ ಅವಕಾಶವಿದೆ. ಅದೇ ರೀತಿಯಾಗಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದಿಸಿದ್ದು, ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.

ಕರ್ನಾಟಕ ಕಾರ್ಮಿಕರ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ-2024, ಕಲ್ಯಾಣ ನಿಧಿ ಸಂಗ್ರಹದ ಮೊತ್ತ ಏರಿಸಲು ವಿಧೇಯಕದಲ್ಲಿ ತಿದ್ದುಪಡಿ ಮಾಡಲಾಗಿದೆ. ಕಾರ್ಮಿಕರಿಂದ 20, ಮಾಲೀಕರಿಂದ 40, ಸರ್ಕಾರದಿಂದ 20 ರೂ. ಬದಲು, 50-100-50 ರೂಪಾಯಿಗಳ ಸಂಗ್ರಹಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. 42 ಕೋಟಿ ರೂ. ವಂತಿಗೆ ಸಂಗ್ರಹ ಆಗುತ್ತಿತ್ತು, ಇದರ ಪ್ರಮಾಣ ಹೆಚ್ಚಾಗಲಿದೆ ಎಂದಿದೆ.

ಮೈಸೂರು ಲಲಿತ ಮಹಲ್ ಪ್ಯಾಲೇಸ್ ಹೋಟೆಲ್​ನ ಕಾರ್ಯಾಚರಣೆ ನಿರ್ವಹಣೆ ದುರಸ್ಥಿ ನವೀಕರಣ ಇವೆಲ್ಲವನ್ನು ಪಾರಂಪರಿಕ ಕಟ್ಟಡ ಸಂರಕ್ಷಸಿ ಹೆರಿಟೇಜ್ ಮಾನದಂಡ ಪ್ರಕಾರ ಮಾಡಲು ಪಾರದರ್ಶಕ ಟೆಂಡರ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!